ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ.ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ. ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹರು ಆದ ಡಾ. ಜಯಪ್ರಕಾಶ್ ಎಂ. ಹೇಳಿದರು.
ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು.
ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ ತನ್ನ ರಕ್ಷಣೆಯ ಜವಾಬ್ದಾರಿಯನ್ನು ಪರಸ್ಪರ ಹಂಚಿಕೊಳ್ಳುವುದು ಎಂದು ಹೇಳಬಹುದು. ದೇಶಕಾಯುವ ಯೋಧರು, ಅನ್ನ ನೀಡುವ ರೈತರು, ಅಕ್ಷರ ಕಲಿಸುವ ಗುರುಗಳು,ಆರಕ್ಷಕರು ಇವರೆಲ್ಲಾ ನಮ್ಮ ರಕ್ಷಕರೇ ಹೌದು. ಹೀಗೇ ಹಲವಾರು ಪ್ರಾಮಾಣಿಕ ಶಕ್ತಿಗಳು ನಮ್ಮ ರಕ್ಷಕರೇ ಆಗಿರುವರು.ಹೀಗೆ ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದ ಮತ್ತು ಏಕತೆಯನ್ನು ಉತ್ತೇಜಿಸಲು ಈ ಹಬ್ಬವನ್ನು ಆಚರಿಸಲಾಗುತ್ತದೆ.ಎಂದು ಹೇಳಿದರು.
ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ . ಎಮ್. ಕೃಷ್ಣ ಭಟ್, ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಸಂತೋಷ್ ಬಿ., ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.
ಬಳಿಕ ಎಲ್ಲಾ ವಿದ್ಯಾರ್ಥಿಗಳು ಪರಸ್ಪರ ರಕ್ಷಾಧಾರಣೆಯನ್ನು ಮಾಡಿದರು.
ವೇದಿಕೆಯಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಕಾರ್ತಿಕ್ ಕುಮಾರ್ ಎನ್. ಉಪಸ್ಥಿತರಿದ್ದರು. ವಿದ್ಯಾರ್ಥಿಯಾದ ಪ್ರಜ್ವಲ್ ಸ್ವಾಗತಿಸಿ, ವಂದಿಸಿದರು.
























