ಮಂಗಳೂರು: ಉಳ್ಳಾಲದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆಯಲ್ಲಿ ಸ್ಕಿಡ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೋಡೆಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಚ ಘಟನೆ ನಡೆದಿದೆ.
ಪಿಲಾರು ಮಹಾಲಕ್ಷ್ಮೀ ಮಂದಿರದ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಅವರೇ ಮೃತ ದುರ್ದೈವಿ.
ಮೃತರು ಖಾಸಗಿ ಕಂಪೆನಿಯೊಂದರ ಎಲೆಕ್ಟ್ರಿಕ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳಿನ ವೇಳೆ ಈ ದುರಂತ ನಡೆದಿದೆ. ರಾಘವೇಂದ್ರ ಅವರ ತಲೆ ಆವರಣ ಗೋಡೆಗೆ ಬಡಿದ ಪರಿಣಾಮ ತೀವ್ರ ಪ್ರಮಾಣದಲ್ಲಿ ಗಾಯಗೊಂಡು ಮೃತರಾಗಿದ್ದಾರೆ.
ಅಪಘಾತ ನಡೆದ ತಕ್ಷಣ ಸ್ಥಳೀಯ ಯುವಕರು ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರ್ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
























