ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕಾರ್ಯಕ್ರಮ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಸ್ವಚ್ಛತಾ ಮತ್ತು ಗೌರವಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸ್ವಾತಂತ್ರ್ಯ ಹೋರಾಟಗಾರ ಜ ಕೆದಂಬಾಡಿ ರಾಮಯ್ಯಗೌಡರ ಸ್ವಾತಂತ್ರ ಹೋರಾಟದ ಬಗ್ಗೆ ಗೌರವ ನುಡಿಗಳನ್ನಾಡಿದರು.

ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ,ಜಿ ಲ್ಲಾ ಕಾರ್ಯದರ್ಶಿ ಪೂರ್ಣಿಮಾ, ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣಿ ಮನೆ, ರಾಜ್ಯ ಮಾಧ್ಯಮ ಪ್ರಮುಖ್ ರತನ್ ರಾಜೇಶ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಪಕ್ಷದ ಪ್ರಮುಖರಾದ ನಿತಿನ್ ಕುಮಾರ್, ನಾರಾಯಣ ಗಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿ ಲಲ್ಲೆಶ್, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ್ಲ ಮತ್ತು ಸಮಿತಿಯ ಸದಸ್ಯ ಮಹೇಶ್ ಮೊಂಟಡ್ಕ, ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸದಸ್ಯರು ಮಂಡಲದ ಯುವ ಮೋರ್ಚಾದ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೆಲ್, ರವಿ ಚಂದ್ರ, ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
























