ಕೋಲಾರ: ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಪೊಲೀಸ್ ವಶಕ್ಕೆ

ಕೋಲಾರ: ಮೂರು ಮಂದಿ ಮಕ್ಕಳು ಸೇರಿದಂತೆ ಒಟ್ಟು ಹತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು ಅವರು ನೀಡಿದ ಮಾಹಿತಿಯನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿರುವುದಾಗಿದೆ.

ಬೆಂಗಳೂರು ಗ್ರಾಮಾಂತರದ ನಂದಿಗುಡಿ ‌ಸಮೀಪ ನಾಲ್ಕು ಮಂದಿ ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ವಶಕ್ಕೆ ಪಡೆದಿರುವುದಾಗಿದೆ.





















































 
 
error: Content is protected !!
Scroll to Top