ದರ್ಶನ್‌, ಪವಿತ್ರಾ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌

ಆರೋಪಿ ಎಷ್ಟೇ ದೊಡ್ಡವನಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ ಎಂದ ಕೋರ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಮಾಡಿ ತೀರ್ಪತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್, ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.





















































 
 

ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್​ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನು ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದುಬಂದಿದೆ.

ಕೊಲೆ ನಡೆದ ಸ್ಥಳದಲ್ಲಿನ ಮಣ್ಣಿನ ಮಾದರಿ, ದರ್ಶನ್, A4 ರಾಘವೇಂದ್ರ, ನಂದೀಶ್ ಮತ್ತು ನಾಗರಾಜು ಪಾದರಕ್ಷೆಗಳಲ್ಲಿ ಸಿಕ್ಕ ಮಾದರಿ ಹೊಂದಾಣಿಕೆ ಆಗಿದೆ. ಡಿಎನ್​ಎಯಲ್ಲೂ ಮೃತನ ರಕ್ತದ ಕಲೆಗಳು ಕೆಲ ಆರೋಪಿಗಳ ಬಟ್ಟೆಗಳ ಮೇಲೆ ಇದೆ. ಕೊಲೆ ನಡೆದ ಸಮಯದಲ್ಲಿ ಪವಿತ್ರಾ ಗೌಡ ಮತ್ತು A2 ದರ್ಶನ್ ಭಾಗಿ ಆಗಿದ್ದಾರೆ.

ಹೈಕೋರ್ಟ್ ಜಾಮೀನು ನೀಡಿದ್ದು ಸರಿ ಇಲ್ಲ, ದಾಖಲೆಗಳಿಗೆ ವಿರುದ್ಧ ತೀರ್ಪು ನೀಡಲಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತನ ಮೈ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ.

ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸೂಕ್ತ ಎಫ್​​ಎಸ್​ಎಲ್‌, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳನ್ನು ಪರಿಗಣಿಸಿಲ್ಲ. ಜಾಮೀನು ವಿಚಾರಣೆ ಹಂತದಲ್ಲಿ ಹೈಕೋರ್ಟ್ ಮಿನಿ ಟ್ರಯಲ್ ನಡೆಸಿದೆ. ಕೊಲೆ ಆರೋಪಿ ದರ್ಶನ್‌​ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವು ಅಂತ ಕೋರ್ಟ್‌ಗೆ​​​ ಹಾಜರಾರಾಗುವುದರಿಂದ ವಿನಾಯಿತಿ ಪಡೆದಿದ್ದರು. ಮರು ದಿನವೇ ದರ್ಶನ್​​ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ ಎಂದು ಸರ್ಕಾರ ವಾದ ಮಂಡಿಸಿತ್ತು.

ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಿನಲ್ಲಿ ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ.

ಈ ತೀರ್ಪಿನಿಂದಾಗಿ ದರ್ಶನ್ ಮತ್ತು ಇತರ ಆರೋಪಿಗಳು ತಕ್ಷಣವೇ ಜೈಲು ಸೇರಬೇಕಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬ ಪ್ರಭಾವ ಬೀರಲಿದೆ ಎನ್ನಲಾಗಿದೆ. ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಮೊದಲು ಬೆಂಗಳೂರು ಜೈಲಿನಲ್ಲಿದ್ದ ಅವರನ್ನು ನಂತರ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿ ದರ್ಶನ್ ಐಷಾರಾಮಿ ಜೀವನ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿತ್ತು.

error: Content is protected !!
Scroll to Top