ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಅವರು 100 ವರ್ಷಗಳ ಸೇವೆಯನ್ನು ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಶ್ಲಾಘಿಸಿದ್ದಾರೆ.
ಶತಮಾನಗಳ ಇತಿಹಾಸ ಹೊಂದಿದ RSS ದೇಶ ಕಟ್ಟುವಲ್ಲಿ ಸಲ್ಲಿಸಿದ ಸೇವೆ ಅಪಾರವಾದುದು ಎಂದು ತಿಳಿಸಿದ್ದಾರೆ.
ಈ ಸ್ವಾತಂತ್ರ್ಯ ಸಂಭ್ರಮದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಉಲ್ಲೇಖಿಸಲು ನಾನು ಹೆಮ್ಮೆ ಪಡುತ್ತೇನೆ. ನೂರು ವರ್ಷಗಳಿಂದ ಸಲ್ಲಿಸುತ್ತಿರುವುದು ಹೆಮ್ಮೆಯ ಮತ್ತು ಸುವರ್ಣ ಅಧ್ಯಾಯವಾಗಿದೆ. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎಂಬ ಸಂಕಲ್ಪ ಮತ್ತು ಭಾರತದ ಕಲ್ಯಾಣ ಗುರಿಗಳ ಜೊತೆಗೆ RSS ಮಾತೃ ಭೂಮಿಯ ಸೇವೆಗಾಗಿ ತಮ್ಮ ಬದುಕನ್ನೇ ಮುಡಿಪಿಟ್ಟಿದ್ದಾರೆ. ಈ ಕಾರಣದಿಂದ RSS ವಿಶ್ವದ ದೊಡ್ಡ NGO ಆಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
























