ರೈತರ ಹಿತಾಸಕ್ತಿ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತವನ್ನು ಸ್ವಾವಲಂಬಿಯಾಗಿ ಮಾಡಿದ ರೈತರ ಹಿತಾಸಕ್ತಿಯ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಮೆರಿಕಾ ಅಧ್ಯಕ್ಷ ಡ್ರೊನಾಲ್ಡ್ ಟ್ರಂಪ್ ಅವರಿಗೆ ಇದು ನನ್ನ ನೇರ ಸಂದೇಶ ಎಂದು ಹೇಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಪ್ರತಿಯೊಬ್ಬರಿಗೂ ಆಹಾರ ಒದಗಿಸುವುದು ಸವಾಲಿನ ಕೆಲಸವಾಗಿತ್ತು. ಆ ಸಂದರ್ಭದಲ್ಲಿ ದೇಶಕ್ಕೆ ಆಹಾರ ಒದಗಿಸುವ ಕೆಲಸ ಮಾಡಿದ್ದು ರೈತರು. ಅವರು ನಮ್ಮನ್ನು ಸ್ವಾವಲಂಬಿಯನ್ನಾಗಿ ಮಾಡಿದ್ದಾರೆ‌‌. ಹಾಗಾಗಿ ನನ್ನ ನಿರ್ಧಾರ ಅಚಲವಾಗಿದ್ದು, ರೈತರ ಹಿತಾಸಕ್ತಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದ್ದಾರೆ.





















































 
 

ಇನ್ನೊಂದು ದೇಶದ ಮೇಲೆ ಅವಲಂಬಿತವಾಗಿರುವುದೇ ದುರಂತ. ಆದ್ದರಿಂದಲೇ ಕೇಂದ್ರ ಸರ್ಕಾರ ಆತ್ಮನಿರ್ಭರಕ್ಕೆ ಪ್ರಾಶಸ್ತ್ಯ ನೀಡಿದೆ ಎಂದು ಹೇಳಿದ್ದಾರೆ. ನಾವು ಸ್ವಾವಲಂಬಿಯಾಗಲು ಇದು ಅತ್ಯಗತ್ಯ. ರೈತರ ಹಿತಾಸಕ್ತಿ ಕಾಪಾಡಲು ವೈಯಕ್ತಿಕವಾಗಿ ಯಾವುದೇ ಬೆಲೆ ತೆರಲು ‌ನಾನು ಸಿದ್ಧ ಎಂದಿದ್ದಾರೆ.

error: Content is protected !!
Scroll to Top