ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗವು 65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿದೆ ಮತ್ತು ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಆರಂಭ ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಸಮಯದಲ್ಲಿ ಅಳಿಸಿ ಹಾಕಲಾದ 65 ಲಕ್ಷ ಮತದಾರರ ಹೆಸರುಗಳನ್ನು ಬಹಿರಂಗ ಮಾಡಿರುವುದಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಆಯೋಗ ಸೋಮವಾರ ಬಿಡುಗಡೆ ಮಾಡಿರುವುದಾಗಿದೆ.
























