ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 24 ಕೊಲೆಗಳ ಆರೋಪ ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಎಫ್.ಐ.ಆರ್. ದಾಖಲಿಸಿ ಬಂಧಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಬಿಎನ್ಎಸ್ ಕಾಯ್ದೆಯಡಿ ಅವಹೇಳನ ಮಾಡಿದ ಆರೋಪದಲ್ಲಿ ಬಂಧಿಸಲು ಸೂಚನೆ ನೀಡಲಾಗಿದೆ.
ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ತಿಮರೋಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಗೃಹ ಸಚಿವರ ಆದೇಶದ ಅನ್ವಯ ಪೊಲೀಸರು ತಿಮರೋಡಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕಾರ್ಯಪ್ರವೃತ್ತರಾಗಿರುವ ಪೊಲೀಸರು ತಿಮರೋಡಿ ವಿರುದ್ಧದ ಹಳೆಯ ಪ್ರಕರಣಗಳನ್ನು ಕೆದಕುತ್ತಿದ್ದಾರೆ.
























