ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಆಶ್ರಯದಲ್ಲಿ ಕೇಪುಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಗೆ ಕೃಷ್ಣ ನಗರ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪುತ್ತೂರು ವಲಯಧ್ಯಕ್ಷ ಸತೀಶ್ ನಾಯ್ಕರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರಾದ ಹರಿಣಾಕ್ಷಿ .ಜೆ .ಶೆಟ್ಟಿ ಅವರು ಮಾದಕ ವಸ್ತುಗಳ ಸೇವನೆಯಿಂದ ಯುವ ಪೀಳಿಗೆ ತಮ್ಮ ಸ್ಥಿಮಿತ ವನ್ನೇ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ತಮ್ಮ ಕಾಲೇಜ್ಗೆ ಹೋಗುವ ಮಕ್ಕಳು ಏನು ಮಾಡುತ್ತಿದ್ದಾರೆ ತಿಳಿದುಕೊಳ್ಳಬೇಕು ಅವರ ಬ್ಯಾಗ್ ಚೆಕ್ ಮಾಡಬೇಕು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಮಾಡುವ ಒಂದೇ ಒಂದು ಕೆಲಸ ಜಾಗೃತಿ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ಪೂಜ್ಯ ವೀರೇಂದ್ರ ಹೆಗ್ಗಡೆಯವರು ಪ್ರತಿ ಗ್ರಾಮಗಳಲ್ಲಿ ನಡೆಸುತ್ತಿದ್ದಾರೆ ಎಂದರು.
ವೇದಿಕೆಯಲ್ಲಿ SDMC ಅಧ್ಯಕ್ಷ ರವಿ ಉಪಸ್ಥಿತರಿದ್ದರು. ಕೇಪುಳು ಒಕ್ಕೂಟದ ಅಧ್ಯಕ್ಷ ಜಯಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕಿ ಮೋಹಿನಿ ಎಸ್. ಗೌಡ ನಿರೂಪಿಸಿದರು. ಒಕ್ಕೂಟದ ಕಾರ್ಯದರ್ಶಿ ಅಶ್ವಿನಿ ಸ್ವಾಗತಿಸಿ, ಸೇವಾ ಪ್ರತಿನಿಧಿ ವೀಣಾ ವಂದಿಸಿದರು. ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
























