ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾತನಾಡುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

ಶುಭಾಂಶು ಅವರು ಪ್ರಧಾನಿ ಅವರೊಂದಿಗೆ ತಮ್ಮ ಅಂತರಾಷ್ಟ್ರೀಯ ಬಾಹ್ಯಾಕಾಶ ಯಾನದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಆ‌ ಬಳಿಕ ಅವರು ತಮ್ಮ ತವರೂರು ಲಕ್ನೋ‌ಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.

ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಖ್ಯಾತಿಗೆ ಭಾಜನರಾದವರು. ಅವರು ಭೂಮಿಗೆ ಬಂದಿಳಿದ ಬಳಿಕ ಇದು ಭಾರತಕ್ಕೆ ಅವರ ಮೊದಲ ಭೇಟಿಯಾಗಿದೆ.





















































 
 
error: Content is protected !!
Scroll to Top