ಬೆಂಗಳೂರು: Golden Book Of World Record ನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯು ಸ್ಥಾನ ಪಡೆದಿದೆ.
ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆ ಬರೆದಿದೆ.
ಈ ಸಾಧನೆಯನ್ನು ಕೆ.ಎಸ್.ಆರ್.ಟಿ.ಸಿ., ಬಿಎಂಟಿಸಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ.
























