ನವದೆಹಲಿ: ತಮಿಳುನಾಡಿನ ಬಿಜೆಪಿ ನಾಯಕ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಅವರನ್ನು ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿ ಪ್ರಧಾನಿ ಶುಭಾಶಯ ತಿಳಿಸಿದರು.
ಈ ಬಗ್ಗೆ ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ, ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದಕ್ಕೆ ಶುಭಾಶಯಗಳನ್ನು ತಿಳಿಸಲಾಯಿತು. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ದೇಶವನ್ನು ಮತ್ತಷ್ಟು ಎತ್ತರದ ಸ್ಥಾನಕ್ಕೆ ಏರಿಸುತ್ತದೆ. ಮುಂದೆಯೂ ಅವರು ಇದೇ ಸಮರ್ಪಣೆ ಮತ್ತು ಸಂಕಲ್ಪದ ಜೊತೆಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಮತ್ತು ಮಿತ್ರ ಪಕ್ಷಗಳ ಜೊತೆಗೆ ಸಭೆ ನಡೆಸಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ. ಅಭ್ಯರ್ಥಿಯಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹೆಸರು ಸೂಚಿಸಿದ್ದರು.
























