ಪುತ್ತೂರು: ಅವಿವಾಹಿತ ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ಭಾನುವಾರ ಸಂಭವಿಸಿದೆ.
ಕಾನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡವರು. ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತೇಜಸ್ವಿನಿ ಅವರು ಜಿಡೆಕಲ್ಲು ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
























