ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು

ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ವಾಚಾಮಗೋಚರವಾಗಿ ನಿಂದಿಸಿದ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಫೇಸ್‌ಬುಕ್‌ ವೀಡಿಯೊದಲ್ಲಿ ಮಹೇಶ್‌ ತಿಮರೋಡಿ ಎಂಬ ವ್ಯಕ್ತಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಹಿರಿಯ ಹಿಂದೂ ನಾಯಕರಾಗಿರುವ ಬಿ.ಎಲ್‌.ಸಂತೋಷ್‌ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಈ ಮೂಲಕ ವಿಭಿನ್ನ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲೆ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್‌ ಕುಲಾಲ್‌ ಎಂಬವರು ದೂರು ನೀಡಿದ್ದಾರೆ.

error: Content is protected !!
Scroll to Top