ನವದೆಹಲಿ: ಸೆ. 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸುಪ್ರೀಂ ಕೋರ್ಟ್‌ನ ಮಾಜಿ ಜಡ್ಜ್ ಜಸ್ಟೀಸ್ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.
ಎನ್.ಡಿ.ಎ. ಯು ತಮಿಳುನಾಡಿನ ಬಿಜೆಪಿ ಮಾಜಿ ಅಧ್ಯಕ್ಷ, ಮಹಾರಾಷ್ಟ್ರ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ವಿಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿರುವುದಾಗಿದೆ.
ಆಗಸ್ಟ್ 21 ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ ಬಳಿಕ ನಾಮ ಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆವ ಪ್ರಕ್ರಿಯೆ ನಡೆಯಲಿದೆ. ಒಂದು ವೇಳೆ ಯಾವ ಅಭ್ಯರ್ಥಿ ಸಹ ನಾಮಪತ್ರ ಹಿಂಪಡೆಯದೆ ಹೋದಲ್ಲಿ ಸೆ. 9 ರಂದು ಚುನಾವಣೆ ನಡೆಯಲಿದೆ.
























