ಅಹಮದಾಬಾದ್: ಖಾಸಗಿ ಶಾಲೆಯೊಂದರ ಒಂಬತ್ತನೇ ತರಗತಿ ವಿದ್ಯಾರ್ಥಿ ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ಇರಿದು ಕೊಂದ ಘಟನೆ ನಡೆದಿದ್ದು, ಶಾಲೆಯ ಹೊರಗೆ ದೊಡ್ಡ ಮಟ್ಟದ ಪ್ರತಿಭಟನೆಯ ಕಾವು ಭುಗಿಲೆದ್ದಿದೆ.
ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರವಾದ ಗಾಯಗಳಿಂದಾಗಿ ಆತ ಕೊನೆಯುಸಿರೆಳೆದಿದ್ದಾನೆ.
ಇರಿತಕ್ಕೆ ಒಳಗಾದ ವಿದ್ಯಾರ್ಥಿ ಸಿಂಧಿ ಸಮುದಾಯಕ್ಕೆ ಸೇರಿದವನಾಗಿದ್ದು, ಆರೋಪಿ ಹುಡುಗ ಮುಸ್ಲಿಂ ಸಮುದಾಯದವನಾಗಿದ್ದಾನೆ. ಆದ್ದರಿಂದ ಈ ಘಟನೆ ಕೋಮು ಸ್ವರೂಪ ಪಡೆದುಕೊಂಡಿದೆ. ಈ ಘಟನೆಯ ಬಗ್ಗೆ ವಿದ್ಯಾರ್ಥಿಯ ಪೋಷಕರು, ಸಮುದಾಯದವರು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
























