ಉಪ್ಪಿನಂಗಡಿ : ಮಹಿಳೆಯ ಸರ ಕಿತ್ತುಕೊಂಡು ಹೋಗಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಪಡುವೆಟ್ಟು ಎಂಬಲ್ಲಿ ಕಳೆದ ಜೂನ್ 4ರಂದು ಮನೆಯ ಗೇಟು ಮುಂಭಾಗದಲ್ಲಿ ನಿಂತಿದ್ದ ಮಹಿಳೆಯೋರ್ವರ ಕತ್ತಿನಿಂದ 6 ಪವನ್ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದು ಎಳೆದುಕೊಂಡು ಪರಾರಿಯಾಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತನಾಗಿರುತ್ತಾರೆ. ಆರೋಪಿಯಿಂದ 4,54,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೈಕ್ ಬಗ್ಗೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ತೆ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಎಸ್. ರವಿ ನೇತೃತ್ವದ ಉಪ್ಪಿನಂಗಡಿ ಪೊಲೀಸರು ಭಾಗವಹಿಸಿದ್ದರು.

error: Content is protected !!
Scroll to Top