ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಂದು ಸುಟ್ಟು ಹಾಕಿದ ದುರುಳರು

ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ನಡೆದ ಪೈಶಾಚಿಕ ಕೃತ್ಯಕ್ಕೆ ಆಕ್ರೋಶ

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಬಳಿಕ ಶವ ಸುಟ್ಟು ಹಾಕಿರುವ ಪೈಶಾಚಿಕ ಕೃತ್ಯ ಚಿತ್ರದುರ್ಗದ ಹಿರಿಯೂರು ಎಂಬಲ್ಲಿ ಸಂಭವಿಸಿದ್ದು, ಈ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.





















































 
 

ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದಲ್ಲಿ ಸ್ಥಳದಲ್ಲಿ ಉದ್ವಿಗ್ನತೆ ನೆಲೆಸಿದ್ದು, ಈ ಬರ್ಬರ ಕೃತ್ಯ ಎಸಗಿದವರನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಕುಟುಂಬದವರು, ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ ಹಾಗೂ ಇತರ ವಿವರಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಒಬ್ಬನಿಗಿಂತ ಹೆಚ್ಚು ಜನ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ವೈಯಕ್ತಿಕ ದ್ವೇಷದ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

error: Content is protected !!
Scroll to Top