ನವದೆಹಲಿ: NDA ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರ ನಾಮನಿರ್ದೇಶನದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಇವರು ಅತ್ಯುತ್ತಮ ಉಪರಾಷ್ಟ್ರಪತಿ ಆಗುತ್ತಾರೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉಪರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರು ನಾಮಪತ್ರ ಸಲ್ಲಿಕೆ ಮಾಡುವಾಗ ಅವರ ಜೊತೆ ಸಚಿವರು, ಪಕ್ಷದ ಸಹೊದ್ಯೋಗಿಗಳು, NDA ನಾಯಕರು ಇದ್ದರು. ಅವರು ಅತ್ಯುತ್ತಮ ಉಪರಾಷ್ಟ್ರಪತಿ ಆಗುತ್ತಾರೆ ಮತ್ತು ದೇಶದ ಪ್ರಗತಿಯತ್ತ ನಮ್ಮ ಪ್ರಯಾಣವನ್ನು ಉತ್ಕೃಷ್ಟಗೊಳಿಸುತ್ತಾರೆ ಎಂದು NDA ಕುಟುಂಬಕ್ಕೆ ವಿಶ್ವಾಸ ಇದೆ ಎಂದಿದ್ದಾರೆ.
ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
























