ಧರ್ಮಸ್ಥಳ ಪ್ರಕರಣ: AI ವಿಡಿಯೋ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡಿದ ಯೂಟ್ಯೂಬರ್ ಬಂಧನ ಸಾಧ್ಯತೆ

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ AI ವಿಡಿಯೋ ಮೂಲಕ ವಿವಾದ ಸೃಷ್ಟಿ ಮಾಡಿದ್ದ ಯೂಟ್ಯೂಬರ್ ಸಮೀರ್ ಬಂಧನಕ್ಕೆ ಧರ್ಮಸ್ಥಳ ಪೊಲೀಸರು ಮುಂದಾಗಿದ್ದಾರೆ.

ಈ ಬಗ್ಗೆ ಹಲವು ಬಾರಿ ಸಮೀರ್‌ಗೆ ನೊ ಟೀ ಸ್ ನೀಡಲಾಗಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆತನ ವಿರುದ್ಧ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿರುವುದಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್‌ನ ಬಾಡಿಗೆ ಮನೆಯನ್ನು ಸುತ್ತುವರೆದಿದೆ ಒಂದು ಮೂಲಗಳು ತಿಳಿಸಿವೆ. ಆತನನ್ನು ಬಂಧಿಸಿ ಧರ್ಮಸ್ಥಳಕ್ಕೆ ಕರೆದು ತರುವ ಸಾಧ್ಯತೆ ಇದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ, ಅದನ್ನು ಮತ್ತಷ್ಟು ವಿಜೃಂಭಿಸುವ ರೀತಿಯಲ್ಲಿ AI ವಿಡಿಯೋ ಮಾಡಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಸಮೀರ ತನ್ನ ಯೂಟ್ಯೂಬ್ ಮೂಲಕ ಮಾಡಿದ್ದ. ಇದು ಪ್ರಕರಣದ ಪ್ರಾಮಾಣಿಕತೆಯನ್ನು ಹಾಳು ಮಾಡುವ ಕೆಲಸ ಎಂದೂ ಪೊಲೀಸರು ಆರೋಪಿಸಿದ್ದಾರೆ.





















































 
 
error: Content is protected !!
Scroll to Top