ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶದಿಂದ ಹಣ : ಇ.ಡಿ. ಪರಿಶೀಲನೆ

ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಬರುತ್ತಿರುವ ಕುರಿತು ಹಲವು ದೂರು ದಾಖಲು

ಧರ್ಮಸ್ಥಳ : ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂಬ ಆರೋಪದ ಬಗ್ಗೆ ಪರಿಶೀಲನೆ ನಡೆಸಲು ಜಾರಿ ನಿರ್ದೇಶನಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಯೂಟ್ಯೂಬರ್‌ಗಳಿಗೆ ವಿದೇಶಗಳಿಂದ ಭಾರಿ ಮೊತ್ತದ ಹಣ ಬಂದಿರುವ ಅನುಮಾನವಿದೆ ಎಂದು ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬೆಂಗಳೂರಿನ ಇ.ಡಿ. ಅಧಿಕಾರಿಗಳು ಈಗ ಯೂಟ್ಯೂಬರ್‌ಗಳ ಆದಾಯದ ಮೂಲ ಕೆದಕುತ್ತಿದ್ದಾರೆ ಎಂದು ತಿಳಿದುಬಂದಿದೆ.





















































 
 

ಕೋಟ ಶ್ರೀನಿವಾಸ ಪೂಜಾರಿಯವರ ಬೆನ್ನಲ್ಲೇ ಬಜರಂಗ ದಳದ ಮುಖಂಡ ತೇಜಸ್ವಿ ಗೌಡ ಅವರೂ ಈ ವಿಚಾರವಾಗಿ ದೂರು ನೀಡಿದ್ದರು. ವಿದೇಶದಿಂದ ಬಂದ ಹಣವನ್ನು ಉಪಯೋಗಿಸಿಕೊಂಡು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿರುದ್ಧ ಅಪಪ್ರಚಾರ ಮಾಡಲು ಓರ್ವ ಮುಸ್ಲಿಂ ಯೂಟ್ಯೂಬರ್​ ವಿದೇಶದಿಂದ ಹಣ ಪಡೆಯುತ್ತಿದ್ದಾನೆ. ಈತನ ಹಣದ ಮೂಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಧರ್ಮಸ್ಥಳದ ಕುರಿತು ಅಪಪ್ರಚಾರ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿಗೆ ದೂರು ಕೊಟ್ಟಿದ್ದಾರೆ.

ಧರ್ಮಸ್ಥಳದ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವ ಮುಸ್ಲಿಂ ಯೂಟ್ಯೂಬರ್ ಮತ್ತು ಅವರ ಸಹಚರರು ವಿದೇಶದಿಂದ ಹಣ ಪಡೆದಿದ್ದಾರೆ ಎಂದು ಮಾಧ್ಯಮಗಳು, ಸಾಮಾಜಿಕ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ ಈ ದೂರುಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ಮಂದಿರವನ್ನು ವಿರೋಧಿಸುವವರು ಸ್ವೀಕರಿಸಿದ ವಿದೇಶಿ ಹಣಕಾಸು ವಹಿವಾಟಿನ ಬಗ್ಗೆ ವಿಚಾರಣೆ ನಡೆಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ. ಎನ್​ಐಎ, ಇ.ಡಿ ಅಧಿಕಾರಿಗಳು ತನಿಖೆ ಮಾಡಬೇಕು ಎಂದು ದೂರು ನೀಡಿದ್ದಾರೆ.

error: Content is protected !!
Scroll to Top