ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ತಾಲೂಕು ಸಂಚಾರಿ ಪೀಠ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ತಿಮರೋಡಿಗೆ ಎರಡು ಬಾರಿ ನೊಟೀಸ್ ನೀಡಲಾಗಿತ್ತು. ಆದರೆ ಅದಕ್ಕೆ ಯಾವುದೇ ಉತ್ತರ ನೀಡದ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದರು.
ತಿಮರೋಡಿ ಬಂಧನದ ಸಮಯದಲ್ಲಿ ಅವರ ನಿವಾಸದ ಸಮೀಪ ಹೈಡ್ರಾಮಾ ನಡೆದಿದ್ದು, ಕೊನೆಗೆ ಅವರ ಖಾಸಗಿ ವಾಹನದಲ್ಲಿ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.
























