ಪುತ್ತೂರು ಪುತ್ತೂರು: ದ. ಕ. ಜವಾಹರ್ ಬಾಲ್ ಮಂಚ್, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ, ಸಂಶೋಧನಾ ಸಂಸ್ಥೆ ಬಾಳ್ತಿಲ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಆ.24ರಂದು ಬೆಳಗ್ಗೆ 9 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ವಕೀಲೆ ಶೈಲಜಾ ರಾಜೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುದ್ದು ಕೃಷ್ಣ ವೇಷ ಸ್ಪರ್ಧೆ, ಯಶೋಧ ಕೃಷ್ಣ ವೇಷ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 11 ರಿಂದ ಶ್ರೀಶೈಲ ಕಲಾ ನೃತ್ಯ ತಂಡದಿಂದ ನವಶಕ್ತಿ ನೃತ್ಯ ರೂಪಕ, 11.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನಡೆಸಲಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಸಭಾಧ್ಯಕ್ಷ ಯು. ಟಿ. ಖಾದರ್ ಸೇರಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 4ರಿಂದ ಸಮಾರೋಪ ಸಮಾರಂಭ, ಬಹುಮಾನ ವಿತರಣೆ ನಡೆಯಲಿದ್ದು, ಮಾಜಿ ಎಂ.ಎಲ್.ಸಿ. ಹರೀಶ್ ಕುಮಾರ್, ವಕೀಲ ಪದ್ಮರಾಜ್ ಪೂಜಾರಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಯೋಜಕಿ ರಮ್ಲತ ಎಂ. ಸಾಮೆತ್ತಡ್ಕ, ಸದಸ್ಯೆ ಜಯಶೀಲಾ ಲೋಕನಾಥ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಶೌರ್ಯ, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.
























