ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ ನಡೆಸಿದೆ.
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಎಂಬವರ ಜೊತೆಗೆ ಹಣಕಾಸಿನ ವ್ಯವಹಾರ ಮಾಡಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇಂದು ಬೆಳಗ್ಗಿನಿಂದಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇಂದು ED ಅಧಿಕಾರಿಗಳು ರಾಜ್ಯದ ವಿವಿಧ ಕಡೆಗಳಲ್ಲಿ ಮತ್ತು ಗೋವಾದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
























