ಬಂಟ್ವಾಳ : ಬಾಲಕನಿಗೆ ಲೈಂಗಿಕ ಕಿರುಕುಳ

ತಲೆಮರೆಸಿಕೊಂಡ ಆರೋಪಿಗೆ ಶೋಧ

ಬಂಟ್ವಾಳ : ಅಪ್ರಾಪ್ತ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ. ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಅಬ್ದುಲ್ಲಾ ಯಾನೆ ಮೋನು ಯಾನೆ ಪಿಲಿಮೋನು ಎಂಬಾತ ಆರೋಪಿಯಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.

ಬಾಲಕ ಕೂದಲು ಕಟ್ ಮಾಡುವುದಕ್ಕಾಗಿ ಸಲೂನ್‌ಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಪಿಲಿ ಮೋನು ಬಾಲಕನನ್ನು ತನ್ನ ಸ್ಕೂಟರ್‌ನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕನ ತಾಯಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.





















































 
 
error: Content is protected !!
Scroll to Top