ರಾಷ್ಟ್ರೀಯ ಹೆದ್ದಾರಿ, ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ

ಬೈಕ್‌, ಸ್ಕೂಟರ್‌ಗಳಿಗೆ ಟೋಲ್‌ ವಿಧಿಸಲಾಗುತ್ತದೆ ಎನ್ನುವುದು ಬರೀ ವದಂತಿ

ನವದೆಹಲಿ: ದೇಶಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ದೃಢಪಡಿಸಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದ್ವಿಚಕ್ರ ವಾಹನಗಳ ಮೇಲೆ ಶುಲ್ಕ ವಿಧಿಸಲು ಯೋಜಿಸಿದೆ ಎಂಬ ಸಾಮಾಜಿಕ ಮಾಧ್ಯಮಗಳ ವದಂತಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008ರ ಪ್ರಕಾರ ನಾಲ್ಕು ಚಕ್ರಗಳು ಮತ್ತು ದೊಡ್ಡ ವಾಹನಗಳಿಗೆ ಮಾತ್ರ ಟೋಲ್ ಅನ್ವಯಿಸುತ್ತದೆ ಮತ್ತು ಇದನ್ನು ಮೋಟಾರ್ ಸೈಕಲ್‌ಗಳು ಅಥವಾ ಸ್ಕೂಟರ್‌ಗಳಿಗೆ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





















































 
 
error: Content is protected !!
Scroll to Top