ಬೆಂಗಳೂರು: ಬಿಜೆಪಿ ನಾಯಕ ಬಿ. ಎಲ್. ಸಂತೋಷ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಆ ಬಳಿಕ ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈಗ ಜಾಮೀನು ಅರ್ಜಿ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ತಿಮರೋಡಿ ಅವರ ಆರೋಗ್ಯದ ಹಿನ್ನೆಲೆ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
























