ಧನ್ಕರ್ ರಾಜೀನಾಮೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆಗೆ ‌ಸಂಬಂಧಿಸಿದ ಹಾಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಧನ್ಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಅನಾರೋಗ್ಯದ ಕಾರಣಗಳನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಜೊತೆಗೆ ತಮ್ಮ ಹುದ್ದೆ, ಪ್ರಧಾನಿ ಮೋದಿ ಅವರಿಗೆ ಮತ್ತು ಇತರ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ ಎನ್ನುವ ಮೂಲಕ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎನ್ನುವ ವಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಸತ್ಯ ಮತ್ತು ಸುಳ್ಳಿನ ವ್ಯಾಖ್ಯಾನಗಳು ವಿಪಕ್ಷಗಳ ಹೇಳಿಕೆಗಳನ್ನು ಅವಲಂಬಿಸಬಾರದು. ಧನ್ಕರ್ ಅವರು ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದವರು. ಕಾನೂನಾತ್ಮಕವಾಗಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಊಹಾಪೋಹ ಅನಗತ್ಯ ಎನ್ನುವ ಮೂಲಕ ಊಹಾಪೋಹ ಹರಡುವವರಿಗೆ ಎಚ್ಚರಿಕೆ ನೀಡಿದ್ದಾರೆ.





















































 
 
error: Content is protected !!
Scroll to Top