ಶಿವರಾಜ್ ಕುಮಾರ್ ಬಳಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಬೆಂಗಳೂರು: ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಟ ಮಡೆನೂರು ಮನು ಇಂದು ನಟ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ.

ನಟಿಗೆ ‌ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ಸಂದರ್ಭದಲ್ಲಿ ಮನು ಅವರದ್ದು ಎನ್ನಲಾದ ಅಡಿಯೋ ಒಂದು ಸದ್ದು ಮಾಡಿತ್ತು. ಅದರಲ್ಲಿ ಶಿವರಾಜ್ ಕುಮಾರ್, ಧ್ರುವ ಸರ್ಜಾ, ದರ್ಶನ್ ಬಗ್ಗೆ ಕೆಟ್ಟದಾಗಿ ಮಾತುಗಳನ್ನಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಮನು ಇಂದು ಶಿವರಾಜ್ ಕುಮಾರ್ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ಈ ಹಿಂದೆ ಕ್ಷಮೆ ಕೇಳುವ ಸಲುವಾಗಿ ಶಿವರಾಜ್ ಕುಮಾರ್ ಭೇಟಿಗೆ ಪ್ರಯತ್ನ ನಡೆಸಿದ್ದರೂ ಅದು ಸಾಧ್ಯವಾಗಿರಲಿಲ್ಲ.





















































 
 

ಶಿವರಾಜ್ ಕುಮಾರ್ ಬಳಿ ಕ್ಷಮೆ ಕೇಳಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿರುವ ಮನು ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿರುವ ವಿಡಿಯೋ ಹಂಚಿಕೊಂಡಿದ್ದು ಅದರಲ್ಲಿ ‘ಅಂತೂ ಇಂತೂ ಒಂದು ಕೆಟ್ಟೆ ಗಳಿಗೆನಾ ದಾಟಿ ಕೊನೆದಾಗಿ ಶಿವಣ್ಣ ಆಶೀರ್ವಾದ ಮಾಡಿದ್ರು… ಜೈ ಶಿವಣ್ಣ ಜೈ ದರ್ಶನ್ ಸರ್ ಜೈ ಧ್ರುವಣ್ಣ ಯಾವತ್ತು ನಿಮಗೆ ನಿಮ್ಮ ಅಭಿಮಾನಿಗಳಿಗೆ ಚಿರಋಣಿಯಾಗಿರುತ್ತೇನೆ ಎಂದಿದ್ದಾರೆ.

error: Content is protected !!
Scroll to Top