ಬೆಂಗಳೂರು: ಸದನದಲ್ಲಿ RSS ಗೀತೆ ಹಾಡಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಿದ್ದು, ಅವರ ಈ ನಡೆಯನ್ನು JDS ಟೀಕಿಸಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಲೇವಡಿ ಮಾಡಿ ಪೋಸ್ಟ್ ಮಾಡಿರುವ JDS, ಉಚ್ಛಾಟನೆಗೆ ಹೆದರಿ ಕ್ಷಮೆ ಯಾಚನೆ ಮಾಡಿದ ಉಪಮುಖ್ಯಮಂತ್ರಿ ಎಂದು ಕಾಲೆಳೆದಿದೆ.
ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನ ಸಭೆಯಲ್ಲಿ RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಟೀಕಿಸಿದೆ.
























