ಆರ್‌ಎಸ್‌ಎಸ್‌ ಗೀತೆ ವಿವಾದ : ಕ್ಷಮೆ ಕೇಳಿದ ಡಿಕೆಶಿ

ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಇಂಡಿ ಒಕ್ಕೂಟದ ನಾಯಕರಿಂದ ಬಹಿರಂಗ ಕ್ಷಮೆಯಾಚನೆ

ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿ ವಿವಾದಕ್ಕೊಳಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಕ್ಷಮೆ ಯಾಚಿಸುವ ಮೂಲಕ ಈ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ. ಆದರೂ ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ ನಾಯಕರ ಕ್ಷಮೆ ಕೇಳುತ್ತೇನೆ ಎಂದರು.





















































 
 

ಹೈಕಮಾಂಡ್ ಆಗಲಿ ಇತರ ಯಾರೂ ಕ್ಷಮೆ ಕೇಳಲು ಸೂಚಿಸಿಲ್ಲ, ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ತಮಗಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ಎಂದು ತನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸಿದವರಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಆರ್​ಎಸ್​ಎಸ್​ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್​​ನ ಅನೇಕ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದ್ದರು. ಬಿ.ಕೆ ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆರ್​​ಎಸ್​​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂದು ವಿಧಾನಸಭೆಯಲ್ಲಿ ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಇನ್ನೇನಿಲ್ಲ ಎಂದರು.

ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ. ನಾನು ಎಂಎ ಪಾಲಿಟಿಕಲ್ ವಿದ್ಯಾರ್ಥಿ. ರಾಜಕಾರಣಕ್ಕೆ ಬರುವುದಕ್ಕಿಂತಲೂ ಮುನ್ನ ಎಲ್ಲ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ಕಮ್ಯೂನಿಸಂ, ಬಿಜೆಪಿ, ಆರ್​​ಎಸ್​​ಎಸ್, ದಳ ಎಲ್ಲ ಪಕ್ಷಗಳ ಬಗ್ಗೆ ತಿಳಿದಿದ್ದೇನೆ. ಮುಸ್ಲಿಂ ಲೀಗ್ ಸಮಾವೇಶದಲ್ಲೂ ಭಾಗಿಯಾಗಿದ್ದೆ. ಅವರ ಶಿಸ್ತಿಗೆ ಬೆರಗಾಗಿದ್ದೆ, ಬೇಕಾದರೆ ಕ್ಷಮೆ ಕೇಳೋಣ. ಬಿಕೆ ಹರಿಪ್ರಸಾದ್​​ಗೂ ಕ್ಷಮೆ ಕೇಳೋಣ ಎಂದರು.

error: Content is protected !!
Scroll to Top