ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

ಕೊಡಗು ಮೂಲದ ರೋಷನ್ ಜೊತೆ ನೆರವೇರಿದ ವಿವಾಹ

ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಮಂಗಳೂರು ಮೂಲದ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಕಿರುತೆರೆಯಲ್ಲಿ ಆಕರ್ಷಕ ನಿರೂಪಣೆಯಿಂದ ಜನಪ್ರಿಯತೆ ಗಳಿಸಿರುಜವ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10.56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.





















































 
 

ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್ ಸು ಫ್ರಂ ಸೋ ಚಿತ್ರದ `ಬಂದರೋ ಬಂದರೋ ಬಾವ ಬಂದರೋ’ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

error: Content is protected !!
Scroll to Top