ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನಲೆ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೋರು ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ( ನಾಳೆ )ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ,ಸರಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
























