ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಮಾತು: ಕಾಂಗ್ರೆಸ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ರಾಹುಲ್ ಗಾಂಧಿ ಅವರ ವೋಟರ್ ಅಧಿಕಾರ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಸಂಬಂಧ ವಿಡಿಯೋ ವೈರಲ್ ಆಗಿದ್ದು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ತೇಜಸ್ವಿ ಯಾದವ್ ಅವರ ಬ್ಯಾನರ್ ಹೊಂದಿದ್ದ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದಿಸಿರುವುದಾಗಿದೆ. ಹಾಗೆಯೇ ಅಲ್ಲಿನ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಪಕ್ಷದ ನೌಶಾದ್‌ಗೆ ಕಾರ್ಯಕರ್ತರು ಜೈಕಾರ ಹಾಕುತ್ತಿರುವುದು ಸಹ ಕಂಡುಬಂದಿದೆ.

error: Content is protected !!
Scroll to Top