ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ

ರಾತ್ರಿ ಹೊತ್ತು ಒಂಟಿ ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು: ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿಯಮ ಬದಲಾವಣೆ ಮಾಡಲಾಗಿದೆ. ಅಕ್ರಮವಾಗಿ ಮರಳು ಸಾಗಾಟ, ಗೋ ಸಾಗಾಟ ಮತ್ತು ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವುದು ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಯನ್ನು ಬಿಗುಗೊಳಿಸಲು ನಿರ್ಧರಿಸಲಾಗಿದೆ. ಕೊಟ್ಟಿಗೆಹಾರ ಬಳಿ ಇರುವ ಪೊಲೀಸ್ ಚೆಕ್‌ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಇನ್ನುಮುಂದೆ ತಪಾಸಣೆ ಇನ್ನಷ್ಟು ಬಿಗುವಾಗಲಿದೆ.

ಈ ಅಪರಾಧ ಚಟುವಟಿಕೆಗಳನ್ನು ತಡೆಯಲು ಚಿಕ್ಕಮಗಳೂರು ಪೊಲೀಸ್ ಇಲಾಖೆ ಹೊಸ ಪ್ಲಾನ್ ರೂಪಿಸಿದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್​ನಲ್ಲಿ ಪ್ರತಿ ವಾಹನವನ್ನು ತಪಾಸಣೆ ಮಾಡುವುದರ ಜೊತೆಗೆ ಚಾರ್ಮಾಡಿ ಘಾಟ್​​ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಈ ಹೊಸ ನಿಯಮ ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ಸಂಚಾರ ಮಾಡುವ ವಾಹನಗಳಿಗೆ ಅನ್ವಯವಾಗಲಿದೆ.





















































 
 

ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಬರುವ ವಾಹನಗಳನ್ನು ಕೊಟ್ಟಿಗೆಹಾರ ಚೆಕ್​​ಪೋಸ್ಟ್​ ಬಳಿ ನಿಲ್ಲಿಸಿ 5 ವಾಹನ ಜೊತೆ ಮಾಡಿ ಬಿಡಲಾಗುತ್ತಿದೆ. ಚಾರ್ಮಡಿ ಘಾಟ್​ನಲ್ಲಿ ರಾತ್ರಿ ವೇಳೆ ಒಂದೊಂದೇ ವಾಹನ ಸಂಚಾರವನ್ನು ಚಿಕ್ಕಮಗಳೂರು ಪೊಲೀಸ್ ಇಲಾಖೆ ನಿಷೇಧಿಸಿದೆ. ಈ ನಿಯಮ ಅಪರಾಧ ತಡೆಯುವ ನಿಟ್ಟಿನಲ್ಲಿ ಜಾರಿ ಮಾಡಲಾಗಿದೆ. 24 ಗಂಟೆಯೂ ಕೊಟ್ಟಿಗೆಹಾರ ಚೆಕ್​​​ಪೋಸ್ಟ್​ನಲ್ಲಿ ಓರ್ವ ಸಬ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 24 ಗಂಟೆಯೂ ಚಾರ್ಮಾಡಿ ಘಾಟ್​​ನಲ್ಲಿ ಪೊಲೀಸ್ ವಾಹನ ಗಸ್ತು ತಿರುಗುವಂತೆ ಸೂಚನೆ ನೀಡಲಾಗಿದೆ.

error: Content is protected !!
Scroll to Top