ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ!

ರಾತ್ರಿ ಹೊತ್ತು ಸ್ಕೂಟರ್‌ನಲ್ಲಿ ಬಂದು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಾಲಕ

ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷ ಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಸುಮಾರು 7.30-8 ಗಂಟೆಯ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಬಗ್ಗೆ ಸಾರ್ವಜನಿಕವಾಗಿ ಗಂಭೀರ ಕಳವಳ ವ್ಯಕ್ತವಾಗಿತ್ತು.





















































 
 

ಸವಾಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಸ್ಥಳೀಯವಾಗಿ ಕೆಲವು ಸಿಸಿಟಿವಿ ಫೂಟೇಜುಗಳನ್ನು ಪರಿಶೀಲನೆ ನಡೆಸಿ ಕೊನೆಗೂ ಆ.26ರಂದು ಆರೋಪಿ ಬಾಲಕನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ. ಬಾಲಕ ಸ್ಕೂಟರಿನಲ್ಲಿ ಹೆಲ್ಮೆಟ್‌ ಹಾಕಿಕೊಂಡು ಬಂದು ರಾತ್ರಿ ವೇಳೆ ಕೆಲಸ ಬಿಟ್ಟು ಮನೆ ತೆರಳುತ್ತಿದ್ದ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಪಾಣೆಮಂಗಳೂರು ಪೇಟೆ ಬಳಿ ತನ್ನ ಪೊಷಕರ ಜೊತೆ ವಾಸವಾಗಿರುವ 13 ವರ್ಷದ ಬಾಲಕ ಈ ಕೃತ್ಯ ಎಸಗಿರುವುದು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕನನ್ನು ಆ. 26ರಂದು ಆತನ ಮನೆಯಲ್ಲಿ ತಾಯಿಯ ಸಮಕ್ಷಮ ವಿಚಾರಿಸಿ ಹೇಳಿಕೆ ಪಡೆದು ಮಂಗಳೂರು ಬಾಲನ್ಯಾಯ ಮಂಡಳಿ ಸಮಕ್ಷಮಕ್ಕೆ ಹಾಜರುಪಡಿಸಲಾಗಿದ್ದು, ಬಾಲ ನ್ಯಾಯಾಲಯ ಬಾಲಕನನ್ನು ಸೆ.2ವರೆಗೆ ಪರಿವೀಕ್ಷಣಾ ಮಂದಿರಕ್ಕೆ ಬಿಡುವಂತೆ ಆದೇಶ ಮಾಡಿದೆ.

error: Content is protected !!
Scroll to Top