ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನಕಾರಿ ವಿಡಿಯೋ ಮಾಡಿದ ಲಾಯರ್ ಜಗದೀಶ್ ಇಂದು ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಜೀವ ಭಯ ಇದ್ದು, ಪೊಲೀಸ್ ಭದ್ರತೆ ಒದಗಿಸುವಂತೆ ಅವರು ವಿನಂತಿ ಮಾಡಿಕೊಂಡಿದ್ದ ಹಿನ್ನೆಲೆ ಇಬ್ಬರು ಪೊಲೀಸರ ಜೊತೆ ಅವರು ಸ್ಟೇಷನ್ ಗೆ ಆಗಮಿಸಿದ್ದರು.

