ಕಲ್ಬುರ್ಗಿ: ಅನ್ಯ ಕೋಮಿನ ಯುವಕನನ್ನು ಪ್ರೀತಿ ಮಾಡಿದಳು ಎಂಬ ಕಾರಣಕ್ಕೆ ತಂದೆಯೇ ಇನ್ನಿಬ್ಬರ ಸಹಾಯದೊಂದಿಗೆ ಮಗಳನ್ನು ಕತ್ತು ಹಿಸುಕಿ, ಸುಟ್ಟು ಹಾಕಿದ ಘಟನೆ ನಡೆದಿದೆ.
ಕೊಲೆಯಾದ ದುರ್ದೈವಿಯನ್ನು ಕವಿತಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ಶಂಕರ ಕೊಳ್ಳು ಅವರು ಪೊಲೀಸ್ ವಶದಲ್ಲಿದ್ದು, ಇನ್ನಿಬ್ಬರು ಆರೋಪಿಗಳಾದ ಶರಣಪ್ಪ, ದತ್ತು ಪರಾರಿಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೊಲೆ ಮಾಡಿದ ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿ ಶವವನ್ನು ಸುಟ್ಟು ಹಾಕಲಾಗಿದೆ. ಆ ಬಳಿಕ ಮಗಳನ್ನು ಕೊಲೆ ಮಾಡಿದ್ದಾಗಿ ತಂದೆ ಒಪ್ಪಿಕೊಂಡಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
























