ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಯುವಕ ಸೆರೆ

11 ಲಕ್ಷ ರೂ. ಮೌಲ್ಯದ ಮಾದಕವಸ್ತು, ಮೊಬೈಲ್‌ ವಶ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜುಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ.

ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ. ಅವನಿಂದ ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ವಶಪಡಿಸಿಕೊಳ್ಳಲಾಗಿದೆ.





















































 
 

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆ.29ರಂದು ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಿದ್ದಾರೆ.

ಆತನ ವಶದಿಂದ 10.85,000 ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು . 11,05,500 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

error: Content is protected !!
Scroll to Top