ಪ್ರಧಾನಿ ನರೇಂದ್ರ ಮೋದಿಯ ಐತಿಹಾಸಿಕ ಚೀನ ಭೇಟಿ ಪ್ರಾರಂಭ

7 ವರ್ಷಗಳ ಬಳಿಕ ಚೀನಕ್ಕೆ ಹೋದ ಮೋದಿ; ಅಧ್ಯಕ್ಷ ಷಿ ಜಿನ್​​ಪಿಂಗ್ ಜೊತೆ ಮಾತುಕತೆ

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಇಂದು ಚೀನ ಅಧ್ಯಕ್ಷ ಷಿ ಜಿನ್​​ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆ ಮಾತುಕತೆ ನಡೆಸಲಿದ್ದಾರೆ. ಜಪಾನ್ ಭೇಟಿ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಚೀನ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆ ಸಡ್ಡು ಹೊಡೆದು ಪ್ರಧಾನಿ ಮೋದಿ ಚೀನ ಭೇಟಿ ಕೈಗೊಂಡಿದ್ದು, ಇದನ್ನು ಇಡೀ ಜಗತ್ತು ಕುತೂಹಲದಿಂದ ವೀಕ್ಷಿಸುತ್ತಿದೆ.

ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ 2025ರಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. 7 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ಮೊದಲ ಚೀನ ಭೇಟಿ ಇದಾಗಿದೆ. ಭಾರತ ಮತ್ತು ಚೀನ ನಡುವಿನ ಸಂಬಂಧಗಳು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಚೀನದಿಂದ ಈ ಆಹ್ವಾನ ಬಂದಿದೆ.





















































 
 

ಗಡಿ ಘರ್ಷಣೆ ಹಾಗೂ ಇನ್ನಿತರ ಕಾರಣಗಳಿಂದಾಗಿ ಕೆಲವರ್ಷಗಳಿಂದ ಭಾರತ ಮತ್ತು ಚೀನ ನಡುವಿನ ಸಂಬಂಧ ಹದಗೆಟ್ಟಿತ್ತು. ಈಗ ಅಮೆರಿಕ ಸುಂಕದ ನೆಪದಲ್ಲಿ ಭಾರತವನ್ನು ಬೆದರಿಸುತ್ತಿರುವ ಹಿನ್ನೆಲಯಲ್ಲಿ ಚೀನ ಜೊತೆ ವ್ಯಾಯಪಾರ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಮೋದಿ ಈ ಐತಿಹಾಸಿಕ ಭೇಟಿ ಕೈಗೊಂಡಿದ್ದಾರೆ. ಉಕ್ರೇನ್ ಯುದ್ಧದ ಮಧ್ಯೆ ರಷ್ಯಾದಿಂದ ತೈಲ ಖರೀದಿಸಿದ್ದಕ್ಕಾಗಿ ಅಮೆರಿಕ ಭಾರತವನ್ನು ಟೀಕಿಸುತ್ತಿರುವ ಸಮಯದಲ್ಲಿ ಪ್ರಧಾನಿ ಮೋದಿ ಅವರ ಈ ಭೇಟಿ ನಡೆಯುತ್ತಿದೆ.

ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಭಾರತವು 2017ರಿಂದ SCO ಸದಸ್ಯ ರಾಷ್ಟ್ರವಾಗಿದೆ.ಮುಖ್ಯ ಶೃಂಗಸಭೆ ಸೆಪ್ಟೆಂಬರ್ 1ರಂದು ನಡೆಯಲಿದೆ. ಭಾನುವಾರ ಮೋದಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ.

error: Content is protected !!
Scroll to Top