ಮಟ್ಟಣ್ಣವರ್‌, ತಿಮರೋಡಿ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ದೂರು

ಮಂಗಳೂರು: ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಆರೋಪಗಳಿದ್ದ ರೌಡಿಶೀಟರ್‌ ಒಬ್ಬನನ್ನು ಕೋಟು ತೊಡಿಸಿ ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್‌ ಮಟ್ಟಣ್ಣನವರ್‌ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಕ್ಷೇತ್ರದ ಭಕ್ತ ಪ್ರವೀಣ್ ಕೆ.ಆರ್ ಎಂಬವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಟ್ಟಣ್ಣನವರ್, ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ರೌಡಿಶೀಟರ್‌ ಮದನ್ ಬುಗುಡಿ ವಿರುದ್ಧ ಕೇಸ್‌ ದಾಖಲಾಗಿದೆ.





















































 
 

ಈ ಹಿಂದೆ ಮಟ್ಟಣ್ಣನವರ್‌ ಮಾಧ್ಯಮಗಳ ಎದುರು ಮಾತನಾಡುವ ವೇಳೆ ಮದನ್ ಬುಗುಡಿಯನ್ನ ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು. ಇದು ಸುಳ್ಳು ಎಂದು ಆರೋಪಿಸಿ ಪ್ರವೀಣ್‌ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ 204, 319(2), 353(2) ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top