ಮೈಸೂರು: ದೇಶದ ಎಲ್ಲಾ ಭಾಷೆ, ಸಂಸ್ಕೃತಿಗಳ ಮೇಲೆ ತಮಗೆ ಗೌರವ ಇದ್ದು, ಕನ್ನಡವನ್ನೂ ಕಲಿಯುವುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿಳಿಸಿದ್ದಾರೆ.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ನನ್ನ ಮಾತೃಭಾಷೆ ಅಲ್ಲದೇ ಹೋದರೂ ನನ್ನ ದೇಶದ ಎಲ್ಲಾ ಸಂಸ್ಕೃತಿ, ಸಂಪ್ರದಾಯಗಳನ್ನು ಆಳವಾಗಿ ಗೌರವಿಸುತ್ತೇನೆ. ಅವೆಲ್ಲದರಲ್ಲೂ ನನಗೆ ಅಪಾರ ಗೌರವ ಇದೆ ಎಂದು ನಾನು ಮುಖ್ಯಮಂತ್ರಿಗಳಿಗೆ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.
ಪ್ರತಿಯೊಬ್ಬರೂ ತಮ್ಮ ಭಾಷೆಗಳನ್ನು ಜೇವಂತವಾಗಿಡಲು ಮತ್ತು ಅವರ ಸಂಪ್ರದಾಯಗಳು ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಶ್ರಮಿಸಬೇಕೆಂದು ರಾಷ್ಟ್ರಪತಿ ಒತ್ತಾಯಿಸಿ, ನಾನು ಖಂಡಿತವಾಗಿಯೂ ಕನ್ನಡವನ್ನು ಕ್ರಮೇಣ ಕಲಿಯಲು ಪ್ರಯತ್ನಿಸುತ್ತೇನೆ
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಸಿ, ದ್ದರಾಮಯ್ಯ ಉಪಸ್ಥಿತರಿದ್ದರು.
























