ಪುತ್ತೂರು: ತೆಂಕಿಲ ನಿವಾಸಿ ಗಿರೀಶ್ ನಾಯ್ಕ್ ರವರು ಅರೋಗ್ಯ ಸಮಸ್ಯೆಯಿಂದ ಬಳಲುತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಮೂಲಕ ಸಹಾಯ ಹಸ್ತದ ಚೆಕ್ಕನ್ನು ಹಸ್ತಾಂತರಿಸಲಾಯಿತು.
ಟ್ರಸ್ಟ್ ಕಚೇರಿಯಲ್ಲಿ ಧನಸಹಾಯ ಹಸ್ಥಾಂತರಿಸಲಾಯಿತು
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ಪ್ರಮುಖರಾದ ಶ್ರೀಕಾಂತ್ ಆಚಾರ್ ಹಿಂದಾರು ಉಪಸ್ಥಿತರಿದ್ದರು.
























