ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೂಟ್ಯೂಬರ್ ಸಮೀರ್ ಮನೆಯಲ್ಲಿ ಇಂದು ಬೆಳ್ತಂಗಡಿ ಪೋಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಬಾಡಿಗೆ ಮನೆಗೆ ನ್ಯಾಯಾಲಯದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೋ ಸಿಬ್ಬಂದಿ ಜೊತೆ ತೆರಳಿ, ಸಮೀಕ್ಷೆ ವಿಡಿಯೋ ತಯಾರಿಸುತ್ತಿದ್ದ ಸ್ಥಳದಲ್ಲಿ ಶೋಧ ನಡೆಸಿರುವುದಾಗಿದೆ. ಈ ವೇಳೆ ಮನೆಯಲ್ಲೇ ಇದ್ದ ಸಮೀರ್ ಪೊಲೀಸರ ಕಾರ್ಯಾಚರಣೆಗೆ ಸಹಕರಿಸಿದ್ದಾಗಿ ತಿಳಿದು ಬಂದಿದೆ.
ಸಮೀರ್ ವಿಡಿಯೋ ತಯಾರಿಗೆ ಬಳಸಿದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಸೇರಿದಂತೆ ಹಲವಾರು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
























