ಪುತ್ತೂರು: ಸೆ. 5 ರಂದು ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವುಗಳ ಆಶ್ರಯದಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ ಬೆಳಗ್ಗೆ 9.30ರಿಂದ ಪುತ್ತೂರಿನ ಜಿ.ಎಲ್. ವನ್ ಮಹಲ್ನ ಮೊದಲ ಮಹಡಿಯಲ್ಲಿ ನಡೆಯಲಿದೆ.
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಮಾಲಕ ಬಲರಾಮ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಅಕ್ಷತಾ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಕವಿತಾ ಅಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಲಾಗಿದೆ.

