ಕೋರ್ಟ್‌ ವ್ಯಾಜ್ಯಗಳ ರಾಜಿ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ

ಎಲ್ಲ ರೀತಿಯ ಪ್ರಕರಣಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ

ಮಂಗಳೂರು: ಎಲ್ಲ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅಕ್ಟೋಬರ್‌ 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ.

ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅಭಿಯಾನದಡಿ ಅವಕಾಶವಿದೆ.





















































 
 

ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಆಗ ದಕ್ಷಿಣ ಕನ್ನಡ ನ್ಯಾಯಾಲಯ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಿಗೆ ಉಭಯ ಪಕ್ಷದವರನ್ನು ಕರೆಯಿಸಲಿದ್ದು, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬಹುದು. ಹೈಕೋರ್ಟ್‌ಗಳಲ್ಲಿ ಪ್ರಕರಣಗಳಿದ್ದರೆ ಸಂಬಂಧಪಟ್ಟವರು ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಅಥವಾ ಕಲಬುರಗಿ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ನ್ಯಾಯಾಧೀಶರು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top