ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ : ಆರೋಪಿ ಜಾಮೀನಿನಲ್ಲಿ ಬಿಡುಗಡೆ

ಎರಡು ತಿಂಗಳಿಂದ ಮಂಗಳೂರು ಜೈಲಿನಲ್ಲಿದ್ದ ಶ್ರೀಕೃಷ್ಣ ಜೆ.ರಾವ್‌

ಪುತ್ತೂರು: ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸಹಪಾಠಿ ಯುವತಿಗೆ ಮಗು ಕರುಣಿಸಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ.ರಾವ್ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯನ್ನಾಗಿ ಮಾಡಿದ್ದ. ಯುವತಿಗೆ ಮಗು ಜನಿಸಿದ್ದು, ಈಗಲೂ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನವುಂಟು ಮಾಡುತ್ತಿದೆ.





















































 
 

ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಜೆ. ಶ್ರೀಕೃಷ್ಣ ರಾವ್‌ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು ಮಾಡಿದೆ. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಮುಗಿಸಿ ಸೆ.4ರಂದು ಆರೋಪಿ ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು. ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ ಮತ್ತು ದೀಪಕ್ ರೈ ವಾದಿಸಿದ್ದರು.

error: Content is protected !!
Scroll to Top