ಪುತ್ತೂರಿನ ಕಿನ್ನಿಪಿಲಿ ರಾಧಾಕೃಷ್ಣ ಶೆಟ್ಟಿ ನಿಧನ

ಪುತ್ತೂರು : ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ಪುತ್ತೂರಿನ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ (60) ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.

ನಿನ್ನೆ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ಇವರು ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಸಣ್ಣ ಹುಡುಗ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡರು.





















































 
 

ಮೃತರು ಪತ್ನಿ ಸುನಂದ, ಪುತ್ರಿ ಅಶ್ವಿನಿ, ಪುತ್ರರಾಧ ಅವಿನಾಶ್ ಹಾಗೂ ಅಭಿಷೇಕ್ ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

error: Content is protected !!
Scroll to Top