ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಕಾನ್‌ಸ್ಟೆಬಲ್‌ ಬಂಧನ

ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿದ್ದ ಕಾನ್ಸ್‌ಸ್ಟೆಬಲ್‌

ಬೆಂಗಳೂರು: ವಕೀಲೆಯಾಗಿರುವ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಸ್‌ಎಎಫ್‌ನ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸಿದ್ದೇಗೌಡ ಅಲಿಯಾಸ್ ಸಿದ್ದು ಬಂಧಿತ ಕಾನ್‌ಸ್ಟೆಬಲ್‌ ಎಂದು ಗುರುತಿಸಲಾಗಿದೆ. ಸಿದ್ದೇಗೌಡ ಮಂಗಳೂರಿನ ಸ್ಪೆಷಲ್ ಆಕ್ಷನ್ ಫೋರ್ಸ್‌ನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಕಾರ್ಯನಿರ್ವಹಿಸುತ್ತಿದ್ದ.

ಬೆಂಗಳೂರಿನಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಜಾತಿ ಕಾರಣ ನೀಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಕೀಲೆ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅತ್ಯಾಚಾರ ಆರೋಪದ ಮೇಲೆ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಬಸವೇಶ್ವರ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.





















































 
 
error: Content is protected !!
Scroll to Top